Latest

ಭೀಕರ ಅಪಘಾತ; ರಸ್ತೆ ಮಧ್ಯೆಯೇ ಹೊತ್ತಿ ಉರಿದ ಲಾರಿಗಳು

ಪ್ರಗತಿವಾಹಿನಿ ಸುದ್ದಿ; ಬೀದರ್: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿಗಳೆರಡು ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ಡಾಬಾ ಬಳಿ ನಡೆದಿದೆ

ಮಹಾರಾಷ್ಟ್ರದ ಪುಣೆಯಿಂದ ಹೈದರಾಬಾದ್ ಗೆ ಲಾರಿಗಳು ತೆರಳುತ್ತಿದ್ದವು. ಮುಂದೆ ಸಾಗುತ್ತಿದ್ದ ಕಂಟೇನರ್ ಗೆ ಹಿಂಬದಿಯಿಂದ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಹೊತ್ತಿಕೊಂಡ ಬೆಂಕಿ ಪರಿಣಾಮ ಸಿಮೆಂಟ್ ತುಂಬಿದ್ದ ಲಾರಿ ಸಂಪೂರ್ಣ ಭಸ್ಮವಾಗಿದ್ದು, ಯವುದೇ ಪ್ರಾಣಹಾನಿ ಸಂಭವಿಸಿಲ್ಲ.

Home add -Advt

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಬಸವಕಲ್ಯಾಣ ಅಗ್ನಿಶಾಮಕ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Related Articles

Back to top button