Latest

ಆತ್ಮಹತ್ಯೆಗೆ ಶರಣಾದ ಬ್ರಿಮ್ಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿ

ಪ್ರಗತಿವಾಹಿನಿ ಸುದ್ದಿ; ಬೀದರ್: ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಮೆಡಿಕಲ್ ಕಾಲೇಜಿನ ಹಾಸ್ಟೇಲ್ ನಲ್ಲಿ ನಡೆದಿದೆ.

ವಿನೂತ್ ಕಾಂಬಳೆ(24) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ವಿನೂತ್ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ.

ಮೂಲತ: ಬಸವಕಲ್ಯಾಣ ತಾಲೂಕಿನ ವಿದ್ಯಾರ್ಥಿಯಾಗಿದ್ದ ಈತ ಬ್ರಿಮ್ಸ್ ಮೆಡಿಕಲ್ ಕಾಲೇಜು ಹಾಸ್ಟೆಲ್ ನಲ್ಲಿ ವಾಸ್ತವ್ಯ ಮಾಡುತ್ತ ಎಂಬಿಬಿಎಸ್ ಓದುತ್ತಿದ್ದ. ಇದೀಗ ವಿನೂತ್ ಶವ ಹಾಸ್ಟೆಲ್ ರೂಮಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button