Film & EntertainmentKarnataka News
*ಕೊಲೆ ಆರೋಪಿ ದರ್ಶನ್ ಭೇಟಿಗೆ ಜೈಲಿಗೆ ಬಂದ ನಟಿ ರಚಿತಾ ರಾಮ್*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಭೇಟಿಗಾಗಿ ನಟಿ ರಚಿತಾ ರಾಮ್ ಜೈಲಿಗೆ ಆಗಮಿಸಿರುವ ಘಟನೆ ನಡೆದಿದೆ.
ತನ್ನ ಗೆಳತಿ ಪವಿತ್ರಾ ಗೌಡಾಗೆ ಅಶ್ಲೀಲ ಮೆಸೇಜ್ ಕಳಿಹಿಸಿದ ಎಂಬ ಕಾರಣಕ್ಕೆ ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ, ಚಿತ್ರಹಿಂಸೆ ನೀಡಿ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಇದೀಗ ಎ1 ಆರೋಪಿಯಾಗಿದ್ದು, ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ.
ನಟ ದರ್ಶನ್ ಭೇಟಿಗಾಗಿ ನಟಿ ರಚಿತಾ ರಾಮ್, ಇಂದು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ದರ್ಶನ್ ಆಪ್ತ ಸಚ್ಚಿದಾನಂದ ಹಾಗೂ ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷ ರುದ್ರೇಶ್ ಜೊತೆ ರಚಿತಾ ರಾಮ್ ಜೈಲಿಗೆ ಆಗಮಿಸಿದ್ದಾರೆ.




