Kannada NewsKarnataka NewsLatest
*ಪೊಲೀಸ್ ಕಾನ್ಸ್ ಟೇಬಲ್ ಮನೆ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೀದರ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಬೀದರ್ ನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯ ಕಾನ್ಸ್ ಟೇಬಲ್ ವಿಜಯ್ ಕುಮಾರ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ವಿಜಯ್ ಕುಮಾರ್ ಚಿಟಗುಪ್ಪ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಕ್ರಮ ಆಸ್ತಿಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.



