Latest

ಕೊರೊನಾ ಭೀತಿಗೆ ಕ್ವಾರಂಟೈನ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡನಾ ವ್ಯಕ್ತಿ?

ಪ್ರಗತಿವಾಹಿನಿ ಸುದ್ದಿ; ಬೀದರ್: ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿಯೊಬ್ಬ ಇಂದು ಬೆಳಗ್ಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಕೊರೊನಾ ಭೀತಿಯಿಂದ ಖಿನ್ನತೆಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಚಿನ್ ಜಾದವ್ (21) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಎಂಟು ದಿನಗಳ ಹಿಂದೆ ಮುಂಬೈನಿಂದ ಪತ್ನಿಯ ಜೊತೆ ಜಿಲ್ಲೆಗೆ ಬಂದಿದ್ದ ಈತನನ್ನು ಜಿಲ್ಲೆಯ ಕಿತ್ತೂರ ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು.

ರಾತ್ರಿ ಪತ್ನಿಯ ಜೊತೆಗಿದ್ದ ಜಾದವ್ ಇಂದು ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಔರಾದ್ ಪೊಲೀಸರು ಭೇಟಿ ಪರಿಶೀಲನೆ ಮಾಡುತ್ತಿದ್ದಾರೆ. ಆದರೆ ಸಚಿನ್ ಜಾದವ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Related Articles

Back to top button