Latest

ಅಧಿಕಾರಿಯನ್ನು ಕಚೇರಿಯಿಂದ ಎಳೆದುತಂದು ಗೇಟ್ ಗೆ ಕಟ್ಟಿಹಾಕಿದ ರೈತರು

ಪ್ರಗತಿವಾಹಿನಿ ಸುದ್ದಿ; ಬೀದರ್: ಬಿತ್ತನೆ ಬೀಜ ಪೂರೈಕೆ ಮಾಡದೇ ಇದ್ದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನೇ ಗೇಟ್ ಗೆ ಕಟ್ಟಿಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೀದರ್ ಜಿಲ್ಲೆ ಔರಾದ್ ನಲ್ಲಿ ನಡೆದಿದೆ.

ರೈತ ಸಂಪರ್ಕ ಕೇಂದ್ರದ ಅಧಿಕಾರಿ ಭೀಮರಾಮ್ ಎಂಬುವವರನ್ನು ರೈತರು ರೈತ ಸಂಪರ್ಕ ಕೇಂದ್ರದ ಗೇಟ್ ಗೆ ಕಟ್ಟಿಹಾಕಿ ಅಧಿಕಾರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Home add -Advt

ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಲವೆಡೆ ಬಿತ್ತನೆ ಕಾರ್ಯ ಆರಂಭವಾಗಿದೆ. ಔರಾದ್ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಸೋಯಾಬಿನ್ ಬಿತ್ತನೆ ಬೀಜಕ್ಕಾಗಿ ರೈತರು ರೈತ ಸಂಪರ್ಕ ಕೇಂದ್ರಕ್ಕೆ ಅಲೆದಾಡುತ್ತಿದ್ದಾರೆ.

ಆದರೆ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಇನ್ನೂ ಬಂದಿಲ್ಲ ಎಂಬ ಉತ್ತರ ನೀಡಿ ರೈತರನ್ನು ಮನೆಗೆ ಕಳುಹಿಸಲಾಗುತ್ತಿದೆ. ಇದರಿಂದ ಬೇಸತ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನು ಕಚೇರಿಯಿಂದ ಎಳೆದುತಂದು ಗೇಟ್ ಗೆ ಕಟ್ಟಿಹಾಕಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ಕೇಸ್; ಕಮೀಷ್ನರ್ ಮಾಹಿತಿ

Related Articles

Back to top button