Karnataka News

*ಬೀದರ್ ಶೂಟೌಟ್ ಆರೋಪಿಗಳು ಹೈದರಾಬಾದ್ ನಲ್ಲಿ ಪತ್ತೆ: ಹಿಡಿಯಲು ಹೋದಾಗ ದುಷ್ಕರ್ಮಿಗಳಿಂದ ಅಲ್ಲಿಯೂ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ಎಟಿಎಂಗೆ ಹಣ ತುಂಬಿಸಲು ಹೋದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿ, 83 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.

ಬೀದರ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಬ್ಯಾಂಕ್ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಪರಾರಿಯಾಗಿದ್ದ ದುಷ್ಕರ್ಮಿಗಳನ್ನು ಪೊಲೀಸರು ಹೈದರಾಬಾದ್ ನಲ್ಲಿ ಪತ್ತೆ ಮಾಡಿದ್ದು, ಅವರನ್ನು ಹಿಡಿಯಲು ಹೋದಾಗ ಮತ್ತೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದಾರೆ.

ಗುಂಡಿನ ದಾಳಿ ವೇಳೆ ಬಸ್ ಟ್ರಾವೆಲ್ ಮ್ಯಾನೇಜರ್ ಗಾಯಗೊಂಡಿದ್ದಾರೆ. ಇನ್ನಿಬ್ಬರು ದರೋಡೆಕೋರರಿಗಾಗಿ ಶೋಧಕಾರ್ಯ ಮುಂದುವರೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button