Kannada NewsKarnataka NewsLatest

*SIR ಕರ್ತವ್ಯದ ವೇಳೆ ಕುಸಿದು ಬಿದ್ದ BLO: ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- SIR ಕರ್ತವ್ಯಕ್ಕೆ ತೆರಳಿದ್ದ ಬಿಎಲ್ ಒ ಓರ್ವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಸ್ ಐಆರ್ ಗೆ ತೆರಳುವಾಗ ತುಮಕೂರಿನಲ್ಲಿ ಬೈಕ್​​​ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಎಒ ಭುವನಾ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಇದೀಗ ಬೀದರ್ ನಲ್ಲಿ ಈ ಘಟನೆ ನಡೆದಿದೆ.

ಬೀದರ್ ತಾಲೂಕಿನ ಅಮಲಾಪುರದಲ್ಲಿ ಬಿಎಲ್ ಒ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ಮೂಲದವರಾಗಿರುವ ಸುನೀಲ್​​ (40) ಮೃತರು ಎಂದು ಗುರುತಿಸಲಾಗಿದೆ.

ಬೀದರ್ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಸರ್ವೇ ನಡೆಸುತ್ತಿದ್ದ ವೇಳೆ ತೀವ್ರ ಎದೆನೋವಿನಿಂದ ಸುಸ್ತಾಗಿ ಸುನೀಲ್​​ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಸ್ಟಂಟ್ ಅಳವಡಿಸುವ ವೇಳೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಗಾಂಧಿ‌ಗಂಜ್ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಘಟನೆ‌ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button