ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೀದರ್ ನಲ್ಲಿ ಟ್ರಕ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಬೀದರ್ ಜಿಲ್ಲೆ ಚಿಟಗುಪ್ಪಾ ತಾಲ್ಲೂಕಿನ ಬೆಮ್ಮಳಖೇಡ ಬಳಿ ನಡೆದ ಅಪಘಾತದಲ್ಲಿ 7 ಜನ ಮೃತರಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಈ ಕುರಿತು ಬೀದರ ಜಿಲ್ಲಾಡಳಿತದೊಂದಿಗೆ ಮಾತನಾಡಿ ಗಾಯಗೊಂಡವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ನಿನ್ನೆ ಸಂಜೆ ಬೀದರ್ ಜಿಲ್ಲೆಯ ಬೆಮ್ಮಳಖೇಡ ಬಳಿ ಟ್ರಕ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಮಹಿಳೆಯರು ಸೇರಿ 7 ಜನರು ಸಾವನ್ನಪ್ಪಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ 6 ಜನರು ಸಾವನ್ನಪ್ಪಿದ್ದರು.
ಪೊಲೀಸರಿಗೆ ಚಂದ್ರಶೇಖರ್ ನನ್ನು ಹುಡುಕಲು ಆಗಿಲ್ಲ; ನನ್ನ ಮಗನನ್ನು ಪತ್ತೆ ಮಾಡಿದ್ದು ಕಾರ್ಯಕರ್ತರು
https://pragati.taskdun.com/latest/chandrashekhar-death-casem-p-renukacharyareaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ