Film & EntertainmentKannada NewsKarnataka NewsLatest

*ಬಿಗ್ ಬಾಸ್ ಮನೆಯಲ್ಲಿಯೇ ಸ್ಪರ್ಧಿಯನ್ನು ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಜನ್-10 ನಡೆಯುತ್ತಿದ್ದು, ಬಿಗ್ ಬಾಸ್ ಮನೆಯೊಳಗೆ ಅರಣ್ಯ ಇಲಾಖೆ ಅಧಿಕಾರಿಗಳು ಎಂಟ್ರಿ ಕೊಟ್ಟು ಸ್ಪರ್ಧಿಯೊಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.

Home add -Advt

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ತಡರಾತ್ರಿ ಬಿಗ್ ಬಾಸ್ ಮನೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ವರ್ತೂರು ಸಂತೋಷ್ ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಅದರಲ್ಲಿಯೂ ಹಳ್ಳಿಕಾರ್ ಕ್ಯಾಟಲ್ ಬ್ರೀಡ್ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿ ಅಧ್ಯಕ್ಷರೂ ಆಗಿದ್ದಾರೆ.

ಈ ಬಾರಿ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂತೋಷ್ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಅವರ ಕತ್ತಿನಲ್ಲಿರುವ ಬೃಹತ್ ಚೈನಿನಲ್ಲಿ ಎರಡು ಹುಲಿ ಉಗುರಿನ ಪೆಂಡೆಂಟ್ ಇದೆ. ಹುಲಿ ಉಗುರು ಧರಿಸಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿದ್ದಾರೆ.

Related Articles

Back to top button