
ಪ್ರಗತಿವಾಹಿನಿ ಸುದ್ದಿ: ರೀಲ್ಸ್ ನಲ್ಲಿ ಲಾಂಗ್ ಹಿಡಿದು ಮಚ್ಚು ಝಳಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಕಿಶನ್ ನನ್ನು ಪೂಲೀಸರು ವಶಕ್ಕೆ ಪಡೆದಿದ್ದಾರೆ.
ವಿನಯ್ ಗೌಡ ಹಾಗೂ ರಜತ್ ಕಿಶನ್, ಡಿ ಬಾಸ್ ಬಟ್ಟೆ ಧರಿಸಿ ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಇಗೂ ನೋಟಿಸ್ ನೀಡಲಾಗಿತ್ತು.
ಠಾಣೆಗೆ ಹಾಜರಾಗಿದ್ದ ವಿನಯ್ ಹಾಗೂ ರಜತ್ ಇಬ್ಬರನ್ನು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.