*Big Breaking News…* *7ನೇ ವೇತನ ಆಯೋಗದ ವರದಿ ಜಾರಿ*: *ರಾಜ್ಯ ಸರಕಾರಿ ನೌಕರರಿಗೆ ಶನಿವಾರವೇ ಗುಡ್ ನ್ಯೂಸ್?*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ಸರಕಾರಿ ನೌಕರರು ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ಕ್ಷಣ ಶನಿವಾರವೇ ಬಂದಂತಿದೆ.
ಶನಿವಾರ ಬೆಳಗ್ಗೆಯೇ ರಾಜ್ಯ ಸರಕಾರ 7ನೇ ವೇತನ ಆಯೋಗದ ವರದಿ ಜಾರಿ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಶನಿವಾರ ಬೆಳಗ್ಗೆ 10 ಗಂಟೆಗೆ 7ನೇ ವೇತನ ಆಯೋಗದ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಿಗೆ ಸಲ್ಲಿಕೆಯಾಗಲಿದ್ದು, ಮರುಕ್ಷಣವೇ ವರದಿ ಜಾರಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಶನಿವಾರ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ತಕ್ಷಣದಿಂದಲೇ ನೀತಿಸಂಹಿತೆ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯೇ 7ನೇ ವೇತನ ಆಯೋಗದ ವರದಿ ಸ್ವೀಕರಿಸಲಿರುವ ಸರಕಾರ, ನೀತಿ ಸಂಹಿತೆ ಜಾರಿಗೆ ಮುನ್ನ ವರದಿ ಜಾರಿ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಆದಷ್ಟು ಶೀಘ್ರವಾಗಿ 7ನೇ ವೇತನ ಆಯೋಗದ ವರದಿ ತರಿಸಿಕೊಂಡು ಸರಕಾರದಿ ನೌಕರರಿಗೆ ಖುಷಿ ಸುದ್ದಿ ನೀಡುವುದಾಗಿ ಮುಖ್ಯಮಂತ್ರಿಗಳು ಕೆಲವೇ ದಿನಗಳ ಹಿಂದೆ ನೌಕರರ ಸಮ್ಮೇಳನದಲ್ಲಿ ಘೋಷಿಸಿದ್ದರು. ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ವರದಿ ಸ್ವೀಕಾರ ಮತ್ತು ಜಾರಿ ವಿಳಂಬವಾಗಬಹುದು ಎನ್ನುವ ಆತಂಕ ನೌಕರರಲ್ಲಿತ್ತು.
ಆದರೆ ಇದೀಗ ಶನಿವಾರ ಬೆಳಗ್ಗೆಯೇ ವರದಿ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದರಿಂದಾಗಿ ನೌಕರರು ಮತ್ತು ಪಿಂಚಣಿದಾರರು ಸೇರಿ ಸುಮಾರು 12 ಸಾವಿರಕ್ಕೂ ಹೆಚ್ಚು ಜನರಿಗೆ ಶನಿವಾರ ಬೆಳಗ್ಗೆಯೇ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ