Belagavi NewsBelgaum NewsKannada NewsKarnataka News

ಫೆ. 26, 27ರಂದು ಬೃಹತ್ ಉದ್ಯೋಗ ಮೇಳ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರುವರಿ ೨೬ ಮತ್ತು ೨೭ ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಯುವ ಸಮೃದ್ಧಿ ಸಮ್ಮೇಳನದ ಅಡಿಯಲ್ಲಿ ರಾಜ್ಯ ಮಟ್ಟದ “ಬೃಹತ್ ಉದ್ಯೋಗ ಮೇಳ”ವನ್ನು ಆಯೋಜಿಸಲಾಗಿದೆ.
ಸದರಿ ಮೇಳದಲ್ಲಿ ೫೦೦ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸುತ್ತಿದ್ದು, ಯಾವುದೇ ವಿದ್ಯಾರ್ಹತೆಯ ಅಭ್ಯರ್ಥಿಗಳು ನೋಂದಾಯಿಸಿಕೊಂಡು ಸಂದರ್ಶನಕ್ಕೆ ಹಾಜರಾಗಿ ಉದ್ಯೋಗ ಪಡೆಯಬಹುದಾಗಿದೆ.
ಬೃಹತ್ ಉದ್ಯೋಗಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು https://skillconnect.kaushalkar.com/

ಗೆ ಭೇಟಿ ನೀಡಿ, ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಾಯಿತ ಅಭ್ಯರ್ಥಿಗಳು ಫೆಬ್ರುವರಿ ೨೬ ಮತ್ತು ೨೭ ರಂದು ನೇರವಾಗಿ ಉದ್ಯೋಗಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲೆಯ ಎಲ್ಲ ಉದ್ಯೋಗಾಕಾಂಕ್ಷಿಗಳು ನೀಡಿರುವ ಲಿಂಕ್ ಮೂಲಕ ನೋಂದಾಯಿಸಿಕೊಂಡು ಸದರಿ ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button