ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರೋಟರಿ ಕ್ಲಬ್ ಆಫ್ ವೇಣುಗ್ರಾಮ ಬೆಳಗಾಮ್ ಅಸೋಸಿಯೇಷನ್ ವತಿಯಿಂದ ಜೂ.22 ರಂದು ಬೆಳಗ್ಗೆ 9 ರಿಂದ 3 ಗಂಟೆಯವರೆಗೆ ಇಲ್ಲಿನ ಕ್ಲಬ್ ರಸ್ತೆಯಲ್ಲಿರುವ ಜ್ಯೋತಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕ್ಲಬ್ ನ ಅಧ್ಯಕ್ಷ ಸಂಜೀವ ದೇಶಪಾಂಡೆ ಹೇಳಿದರು.
ಬುಧವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರೋಟರಿ ಕ್ಲಬ್ ಆಫ್ ವೇಣುಗ್ರಾಮ ಬೆಳಗಾಮ್ ಅಸೋಸಿಯೇಷನ್ ಸಮಾಜ ಸೇವೆ, ಮ್ಯಾರಥಾನ್ ಅಂಥ ಕಾರ್ಯಕ್ರಮಗಳನ್ನು ಮಾಡಿ ಯಶಸ್ವಿಯಾಗಿದ್ದೇವೆ. ಬೆಳಗಾವಿ ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈಗಾಗಲೇ ನಾವು ಬೆಳಗಾವಿ ಚೇಂಬರ್ ಆಫ್ ಕಾಮಸ್೯, ಟಾಟಾ ಮೋಟರ್ಸ್ ಹಾಗೂ ಏಕಸ್ ಕಂಪನಿಯೊಂದಿಗೆ ಮಾತುಕತೆ ನಡೆಸಿದ್ದೇವೆ. ಅಲ್ಲದೆ, ಮುಂಬೈ, ಬೆಂಗಳೂರು, ಪುಣೆ, ಮೈಸೂರ, ಅಹ್ಮದಾಬಾದ್ ಕಂಪನಿಗಳಿಗೂ ಆಹ್ವಾನ ನೀಡಲಾಗಿದೆ. ಬೆಳಗಾವಿಯ ನಿರುದ್ಯೋಗಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಬೆಳಗಾವಿ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಹೋಗುತ್ತಿರುವುದು ವಿಪರ್ಯಾಸದ ಸಂಗತಿ. ಇಲ್ಲಿನ ವಿದ್ಯಾರ್ಥಿಗಳು ಸ್ಥಳೀಯವಾಗಿ ಕೆಲಸ ಕೊಡಿಸುವ ಪ್ರಯತ್ನ ಮಾಡಲಾಗುವುದು. ಈಗಾಗಲೇ 600 ಜನ ರಿಜಿಸ್ಟರ್ ಮಾಡಿಸಿದ್ದಾರೆ ಎಂದು ಹೇಳಿದರು.
ಶಿವಾನಂದ ಪಾಟೀಲ್, ಡಿ.ಬಿ.ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ