Kannada NewsKarnataka NewsLatest

*BIG NEWS* *ಶನಿವಾರ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ ಜಂಟಿ ಸುದ್ದಿಗೋಷ್ಠಿ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ದಿನಾಂಕ 08-11-2025 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಜಂಟಿಯಾಗಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಪ್ರಸ್ತುತ ನವೆಂಬರ್ ಕ್ರಾಂತಿ ಸುದ್ದಿ ಜೋರಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಈ ಇಬ್ಬರ ಪತ್ರಿಕಾಗೋಷ್ಠಿ ಎಲ್ಲರ ಗಮನ ಸೆಳೆದಿದೆ.

ಪೊಲೀಸ್ ದೂರು

Home add -Advt

ಈ ಮಧ್ಯೆ, ಡಿ.ಸಿ.ಎಂ. ಶಿವಕುಮಾರ ಅವರು ಸಭೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಟ್ಟಿನಿಂದ ದೂಡಿ ಕೆಳಗೆ ಕೆಡವಿದ್ದಾರೆ ಎಂದು ಕನ್ನಡ ಚಿತ್ರರಂಗ ಎನ್ನುವ ಇನಸ್ಟಾಗ್ರಾಂ ಪೇಜ್ ನಲ್ಲಿ ಸುದ್ದಿಯೊಂದು ಪ್ರಕಟವಾದ ಹಿನ್ನೆಲೆಯಲ್ಲಿ ನ್ಯಾಯವಾದಿ ದೀಪ ಎನ್ನುವವರು ಪೊಲೀಸ್ ದೂರು ನೀಡಿದ್ದಾರೆ.

ಟಿವಿ ವಾಹಿನಿಯಲ್ಲಿ ಈ ಕುರಿತು ಸುದ್ದಿ ಪ್ರಸಾರವಾಗುತ್ತಿದೆ ಎಂದು ಎಐ ಆಧಾರಿತ ಪೋಸ್ಟ್ ಮಾಡಲಾಗಿದ್ದು, ಇದರಿಂದ ಈ ಇಬ್ಬರ ಘನತೆಗೆ ಧಕ್ಕೆಯಾಗುವುದಲ್ಲದೆ, ಸರಕಾರಕ್ಕೂ ಮುಜುಗರ ತರಲಿದೆ. ಜೊತೆಗೆ ಗಲಭೆಯಾಗುವ ಸಾಧ್ಯತೆಯೂ ಇಲ್ಲದಿಲ್ಲ. ಹಾಗಾಗಿ ಈ ಪೋಸ್ಟ್ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದೂರು ನೀಡಲಾಗಿದೆ.

Related Articles

Back to top button