*ಜೋಶಿಗೆ ಬೀಗ್ ರೀಲಿಫ್: ಚುನಾವಣೆಯಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ*
ಪ್ರಗತಿವಾಹಿನಿ ಸುದ್ದಿ: ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಭಾರಿ ಚರ್ಚೆಗೆ ಕಾರಣವಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರ ಸದ್ಯ ತಣ್ಣಗಾಗಿದೆ. ದಿಂಗಾಲೇಶ್ವರ ಸ್ವಾಮೀಜಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಬಿಜೆಪಿ ಅಭ್ಯರ್ಥಿ ಪ್ರಲ್ಲಾದ್ ಜೋಶಿ ಅವರಿಗೆ ಬೀಗ್ ರೀಲಿಪ್ ಸಿಕ್ಕಿದೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಲಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಇದರಿಂದ ಪ್ರಹ್ಲಾದ್ ಜೋಶಿಗೆ ರಿಲೀಫ್ ಸಿಕ್ಕಂತಾಗಿದೆ.
ಪ್ರಲ್ಲಾದ ಜೋಶಿ ಅವರು, ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿ, ಸ್ವಾಮೀಜಿಯವರು ನಾಮಪತ್ರ ಸಲ್ಲಿಸಿದ್ದರು. ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದಯ ಹಠ ಹಿಡಿದಿದ್ದರು ಆದರೆ ಈ ಸಂಬಂಧ ಧಾರವಾಡದ ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದಿದ್ದು, ಅವರ ಜೊತೆ ಸಭೆ ನಡೆಸಿ ನಾಪತ್ರ ವಾಪಸ್ ತಗೆದುಕೊಳ್ಳುವದಾಗಿ ತಮ್ಮ ಅಂತಿಮ ನಿರ್ಧಾರ ಪ್ರಕಟಿಸಿದ್ದಾರೆ. ಸದ್ಯ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ್ ಜೋಶಿ ಹಾಗೂ ವಿನೋದ್ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ