Latest

2 ಕೆಜಿ ಚಿನ್ನ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಭರ್ಜರಿ ಕಾರ್ಯಾಚರಣೆ ನಡೆಸಿರುವ ಮಂಗಳೂರು ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 2 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ದುಬೈನಿಂದ ಬಂದಿಳಿದ ಪ್ರಯಾಣಿಕನೊಬ್ಬ ತನ್ನ ಜೀನ್ಸ್ ಪ್ಯಾಂಟ್, ಒಳ ಉಡುಪಿನಲ್ಲಿ ಚಿನ್ನವನ್ನಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆರೋಪಿ ಸಿಕ್ಕಿಬಿದ್ದಿದ್ದು, 1.993ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಆಸೀಫ್ ಎಂದು ಗುರುತಿಸಲಾಗಿದೆ.

Home add -Advt

ಇದೇ ವೇಳೆ ಇನ್ನೊಂದು ಪ್ರಕರಣ ಭೇದಿಸಿರುವ ಅಧಿಕಾರಿಗಳು ಶೂನಲ್ಲಿ ಚಿನ್ನವಿಟ್ಟು ಸಾಗಿಸುತ್ತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತನಿಂದ 319 ಗ್ರಾಂ ಚಿನ್ನ ಜಪ್ತಿ ಮಾಡಿದ್ದಾರೆ.

Related Articles

Back to top button