Film & EntertainmentKannada NewsKarnataka NewsLatest

*ರೇಣುಕಾಸ್ವಾಮಿ ಕೇಸ್‌ಗೆ ಬಿಗ್‌ ಟ್ವಿಸ್ಟ್*: *ಪಿಎಸ್‌ಐ ವಿನಯ್ ವಿರುದ್ಧ ಇಲಾಖಾ ತನಿಖೆ!*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಿರುವ ಬೆನ್ನಲ್ಲೇ, ಪ್ರಕರಣದ ತನಿಖೆಯಲ್ಲಿನ ಲೋಪದೋಷಗಳ ಕುರಿತು ದೂರು ಸಲ್ಲಿಕೆಯಾಗಿದೆ. ಇದರ ಬೆನ್ನಲ್ಲೇ ಪಿಎಸ್‌ಐ ವಿನಯ್ ಮತ್ತು ತನಿಖಾಧಿಕಾರಿ ಎಸಿಪಿ ಚಂದನ್ ವಿರುದ್ಧ ಇಲಾಖಾ ತನಿಖೆಗೆ ಸೂಚನೆ ನೀಡಲಾಗಿದೆ.

ಪ್ರಕರಣದ ತನಿಖೆಯಲ್ಲಿ ಹಲವು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ ಹಾಗೂ ಪಿಎಸ್‌ಐ ವಿನಯ್ ಅವರನ್ನು ಆರೋಪಿ ಸ್ಥಾನದಿಂದ ಕೈಬಿಡಲಾಗಿದೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಈ ಸಂಬಂಧ ಅವರು ಡಿಜಿ ಮತ್ತು ಐಜಿ ಡಾ. ಎಂ. ಸಲೀಂ ಅವರಿಗೆ ದೂರು ಸಲ್ಲಿಸಿದ್ದರು.

ಪಿಎಸ್‌ಐ ವಿನಯ್ ಅವರ ಸೂಚನೆಯಂತೆ ಆರೋಪಿಗಳು ರೇಣುಕಾಸ್ವಾಮಿ ಮೃತದೇಹವನ್ನು ಬಿಸಾಡಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಹೀಗಾಗಿ ವಿನಯ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಈ ದೂರಿನ ಹಿನ್ನೆಲೆಯಲ್ಲಿ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಇಲಾಖಾ ತನಿಖೆ ನಡೆಸಲು ಸೂಚಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಮತ್ತು ಪಿಎಸ್‌ಐ ವಿನಯ್ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಪರಿಶೀಲಿಸಲಾಗುತ್ತದೆ.

ಸದ್ಯ ಪ್ರಕರಣದ ತನಿಖಾ ತಂಡದ ಅಧಿಕಾರಿಗಳ ವಿರುದ್ಧವೇ ಇಲಾಖಾ ತನಿಖೆಗೆ ಸೂಚಿಸಿರುವುದು ಹೊಸ ಬೆಳವಣಿಗೆಯಾಗಿದೆ. ಆರೋಪಗಳ ಕುರಿತು ತನಿಖೆಯಲ್ಲಿ ಯಾವ ಅಂಶಗಳು ಹೊರಬರಲಿವೆ ಎಂಬುದನ್ನು ಕಾದುನೋಡಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button