
ಪ್ರಗತಿವಾಹಿನಿ ಸುದ್ದಿ: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನನ್ನು ನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಕಿಶನ್ ಹಾಗೂ ವಿನಯ್ ಗೌಡ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಬೆಂಗಳುರಿನ ಬಸವೇಶ್ವರನಗರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಇಬ್ಬರು ಜೈಲು ಸೇರಿದ್ದರು. ಷರತ್ತು ಬದ್ಧ ಜಾಮೀನು ಪಡೆದು ಬಿಡಿಗಡೆಯಾಗಿದ್ದ ರಜತ್ ಹಾಗೂ ವಿನಯ್ ಗೌಡಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು. ಆದರೆ ರಜತ್ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ವಾರೆಂಟ್ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಠಾಣೆ ಪೊಲೀಸರು ರಜತ್ ಮನೆಗೆ ತೆರಳಿ ರಜತ್ ನನ್ನು ಬಂಧಿಸಿದ್ದಾರೆ.