*ಅತೀ ದೊಡ್ಡ ಗ್ಯಾರಂಟಿ ಗೃಹಲಕ್ಷ್ಮೀ ಜಾರಿ ಸವಾಲು:* *ಯಶಸ್ವಿಯಾಗಿ ನಿಭಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಪ್ರಕ್ರಿಯೆಯಲ್ಲಿ ಪ್ರಸ್ತುತ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ನೇತೃತ್ವದ ಸರಕಾರ ತೊಡಗಿಕೊಂಡಿದೆ. ಮೂರನ್ನು ಈಗಾಗಲೆ ಜಾರಿಗೊಳಿಸಲಾಗಿದ್ದರೆ, ಇನ್ನೆರಡು ಯೋಜನೆ ಜಾರಿಯ ಹಂತದಲ್ಲಿದೆ. 5 ಗ್ಯಾರಂಟಿಗಳಲ್ಲಿ ಅತ್ಯಂತ ದೊಡ್ಡದಾದ ಗೃಹಲಕ್ಷ್ಮೀ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಹೊಣೆ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿನ ಏಕೈಕ ಮಹಿಳಾ ಮಂತ್ರಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬಂದಿತು. ಹಾಗಾಗಿ, ತಾವು ಸಚಿವರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ … Continue reading *ಅತೀ ದೊಡ್ಡ ಗ್ಯಾರಂಟಿ ಗೃಹಲಕ್ಷ್ಮೀ ಜಾರಿ ಸವಾಲು:* *ಯಶಸ್ವಿಯಾಗಿ ನಿಭಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*