Latest

ಬಿಹಾರ ಚುನಾವಣೆ: ಎನ್ ಡಿಎ ತೊರೆದ ಎಲ್ ಜೆಪಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಹಾರ ವಿಧಾನಸಭಾ ಚುನಾವಣಾ ಬೆನ್ನಲ್ಲೇ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ ಎನ್ ಡಿಎ ಮೈತ್ರಿ ತೊರೆಯುತ್ತಿರುವುದಾಗಿ ಘೋಷಿಸಿದೆ. ಅಲ್ಲದೇ ಚುನಾವಣೆಯಲ್ಲಿ ಎಲ್ ಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ.

ನವದೆಹಲಿಯಲ್ಲಿ ಚಿರಾಗ್ ಪಾಸ್ವಾನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಥಾನ ಹಂಚಿಕೆ ವಿಚಾರವಾಗಿ ಬಿಕ್ಕಟ್ಟು ಎದುರಾದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಲ್ ಜೆಪಿ 143 ಸ್ಥಾನಕ್ಕಾಗಿ ಎನ್ ಡಿಎ ಗೆ ಬೇಡಿಕೆ ಇಟ್ಟಿತ್ತು. ಆದರೆ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ.

ಈ ಕುರಿತು ಮಾತನಾಡಿದ ಎಲ್‌ಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅಬ್ದುಲ್‌ ಖಾನ್‌, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದ ಮೈತ್ರಿಯೊಂದಿಗೆ ನಾವು ಚುನಾವಣೆಯನ್ನು ಎದುರಿಸಲ್ಲ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button