*BREAKING: 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತಿಶ್ ಕುಮಾರ್*

ಬಿಜೆಪಿಯ ಇಬ್ಬರು ಡಿಸಿಎಂ ಆಗಿ ಪದಗ್ರಹಣ
ಪ್ರಗತಿವಾಹಿನಿ ಸುದ್ದಿ: ಬಿಹಾರ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಎನ್ ಡಿಎ ಮೈತ್ರಿ ಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ 10ನೇ ಬಾರಿ ಪ್ರಮಾಣವಚನ ಸ್ವೀಕರಿಸುವ ಮೂಲಕ ದಾಖಲೆ ಬರೆದಿದ್ದಾರೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ 10ನೇ ಬಾರಿ ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರೀಫ್ ಖಾನ್ ಪ್ರಮಾಣವಚನ ಬೋಧಿಸಿದರು. ಬಿಹಾರ ಸಿಎಂ ಆಗಿ ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವುದಾಗಿ ನಿತೀಶ್ ಕುಮಾರ್ ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿಯ ಇಬ್ಬರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಸಾಮ್ರಾಟ್ ಚೌದರಿ ಹಾಗೂ ವಿಜಯ್ ಕುಮಾರ್ ಸಿನ್ಹಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನತಹ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಎನ್ ಡಿಎ ನಾಯಕರು ಉಪಸ್ಥಿತರಿದ್ದರು.



