
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ನಾಯಕನನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಸುರೇಂದ್ರ ಕೇವತ್ (52) ಹತ್ಯೆಯಾದ ಬಿಜೆಪಿ ಮುಖಂಡ. ಸುರೇಂದ್ರ ಕೇವತ್ ಶೇಕ್ ಪುರದಲ್ಲಿರುವ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತತಿದ್ದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸುರೇಂದ್ರ ಕೇವತ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ನಾಲ್ಕು ಗುಂಡುಗಳು ಸುರೇಂದ್ರ ದೇಹವನ್ನು ಹೊಕ್ಕಿವೆ. ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.