Latest

ಬಿಹಾರ ಮುಖ್ಯಮಂತ್ರಿಯಾಗಿ 6ನೇ ಬಾರಿಗೆ ನಿತೀಶ್ ಕುಮಾರ್ ಆಯ್ಕೆ

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಎನ್ ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದ್ದು, ಈ ಮೂಲಕ ನಿತೀಶ್ ಕುಮಾರ್ 6ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನಿತೀಶ್ ಕುಮಾರ್ ನಿವಾಸದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಎನ್ ಡಿಎ ಮೈತ್ರಿಕೂಟ ಸಭೆಯಲ್ಲಿ ಅಧಿಕೃತವಾಗಿ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 11:30ಕ್ಕೆ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿಯಾಗಿ ಮತ್ತೊಂದು ಅವಧಿಗೆ ಪದಗ್ರಹಣ ಮಾಡಲಿದ್ದಾರೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ 122 ಮ್ಯಾಜಿಕ್ ಸಂಖ್ಯೆಯಾಗಿದ್ದು, ನಿತೀಶ್ ಕುಮಾರ್ ನೇತೃತ್ವದ ಜೆಡಿಯು 43 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ 74 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಮಹಾಘಟಬಂಧನ್ 110 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

 

Home add -Advt

Related Articles

Back to top button