
ಪ್ರಗತಿವಾಹಿನಿ ಸುದ್ದಿ: ಪೆರೋಲ್ ಮೇಲೆ ಬಿಡುಗಡೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗ್ಯಾಂಗ್ ಸ್ಟರ್ ಓರ್ವನನ್ನು ಆಸ್ಪತ್ರೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬಿಹಾರದ ಪಾಟ್ನಾದಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗ್ಯಾಂಗ್ ಸ್ಟರ್ ಚಂದನ್ ಮಿಶ್ರಾ ಬಲಿಯಾಗಿದ್ದಾನೆ.
ಆಸ್ಪತ್ರೆಗೆ ಶಸ್ತ್ರ ಸಜ್ಜಿತ ದುಷ್ಕರ್ಮಿಗಳು ನುಗ್ಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲು ವೈರಲ್ ಆಗಿದೆ. ಚಂದನ್ ಮಿಶ್ರಾ ಕೊಲೆ ಆರೋಪದಲ್ಲಿ ಜೈಲು ಸೇರಿದ್ದ. ಆರೋಗ್ಯ ಸಮಸೆ ಹಿನ್ನೆಲೆಯಲ್ಲಿ ಪೆರೋಲ್ ಮೇಲೆ ಹೊರಬಂದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ. ಇದೀಗ ಐವರು ದುಷ್ಕರ್ಮಿಗಳ ಗುಂಡಿನ ದಾಳಿಗೆ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ.