ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಪೊಲೀಸ್ ಸಿಬ್ಬಂದಿಗಳು ಇನ್ಮುಂದೆ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವಂತಿಲ್ಲ ಎಂದು ಬಿಹಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಹತ್ವದ ಆದೇಶ ಹೊರಡಿಸಿದ್ದಾರೆ.
ಪೊಲೀಸರು ಕರ್ತವ್ಯ ನಿರ್ವಹಣೆ ಬಿಟ್ಟು ಅನಗತ್ಯವಾಗಿ ಸೋಶಿಯಲ್ ಮೀಡಿಯಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಬೇಜವಾಬ್ದಾರಿ ಮೆರೆದ ನಿದರ್ಶನಗಳು ಬೆಳಕಿಗೆ ಬಂದ ಬೆನ್ನಲ್ಲೇ ಬಿಹಾರ ಡಿಜಿ-ಐಜಿಪಿ ಇಂತದ್ದೊಂದು ಆದೇಶ ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ, ಸಂಚಾರ ನಿರ್ವಹಣೆ, ವಿವಿಐಪಿ ಭದ್ರತೆ ಕಾಪಾಡಬೇಕಿರುವ ಪೊಲೀಸರು ಕರ್ತವ್ಯಬಿಟ್ಟು ಬೇರೆ ಸಾಮಾಜಿಕ ಮಾಧ್ಯಮಗಳಲ್ಲಿ ಅನಗತ್ಯವಾಗಿ ತೊಡಗಿಸಿಕೊಂಡಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವಿಶೇಷ ಸಂದರ್ಭಗಳಲ್ಲಿ ಕೆಲವರಿಗೆ ಮಾತ್ರ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣ ಬಳಕೆಗೆ ಅವಕಾಶ ನೀಡಲಾಗಿದೆ.
ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ನಿರ್ಧಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ