Latest

ಅಂತ್ಯಕ್ರಿಯೆ ಮುಗಿಸಿ ಬರುವಾಗ ಭಿಕರ ಅಪಘಾತ; 6 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಟ್ರಕ್ ಹಾಗೂ ಎಸ್ ಯುವಿ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟ ಘಟನೆ ಬಿಹಾರದ ಜಮುಯಿ ಎಂಬಲ್ಲಿ ಸಂಭವಿಸಿದೆ.

ಖೈರಾದಿಂದ ಪಾಟ್ನಾಕ್ಕೆ ತೆರಳಿದ್ದ 6 ಜನರು ಅಂತ್ಯಕ್ರಿಯೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಸಿಕಂದ್ರಾ-ಶೇಖ್ ಪುರ ಮುಖ್ಯರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಸ್ ಯುವಿ ವಾಹನದಲ್ಲಿದ್ದ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರತಾಪ್ ಸಿಂಹ ಗಂಡೋ, ಹೆಣ್ಣೋ ?; ಅನ್ಸಾರಿ ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button