ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ನೂಡಲ್ಸ್ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು 6 ಜನರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ.
ಫ್ಯಾಕ್ಟರಿಯಲ್ಲಿ ಇದ್ದಕ್ಕಿದ್ದಂತೆ ಬಾಯ್ಲರ್ ಸ್ಫೋಟಗೊಂಡು, ಈ ದುರ್ಘಟನೆ ಸಂಭವಿಸಿದೆ. ಕಾರ್ಖಾನೆಯಲ್ಲಿ ಎಷ್ಟು ಜನರು ಇದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಆದರೆ ದುರಂತದಲ್ಲಿ 6 ಜನ ಸಾವನ್ನಪ್ಪಿದ್ದು, 12 ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿರುವ 5 ಕ್ಕೂ ಹೆಚ್ಚು ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಮಿಲಿಟರಿ ದಾಳಿಗೆ ಮಕ್ಕಳು, ಮಹಿಳೆಯರು ಸೇರಿ 30ಕ್ಕೂ ಹೆಚ್ಚು ಜನ ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ