National

*ಕಳ್ಳಭಟ್ಟಿ ಸೇವಿಸಿ 20ಕ್ಕೂ ಹೆಚ್ಚು ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಕಳ್ಳಭಟ್ಟಿ ಸಾರಾಯಿ ಸೇವಿಸಿ 20ಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ಸಿವಾನ್, ಛಾಪ್ರಾ ಜಿಲ್ಲೆಗಳಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಈ ದುರಂತ ಸಂಭವಿಸಿದ್ದು, 40ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಹಲವರು ಕಣ್ಣು ದೃಷ್ಟಿ ಕಳೆದುಕೊಂಡಿದ್ದಾರೆ.

Home add -Advt

ಸಿವಾನ್ ನ ಭಗವಾನ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಘರ್ ಗ್ರಾಮದಲ್ಲಿ ಪಾಲಿಥಿನ್ ಮಿಶ್ರಿತ ಮದ್ಯ ಸೇವಿಸಿ ಜನರು ಅಸ್ವಸ್ಥರಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾರೀಗ್ಯಕ್ಕೀಡಾಗಿದ್ದವರಲ್ಲಿ 24 ಜನರು ಸಾವನ್ನಪ್ಪಿದ್ದಾರೆ.

ಛಾಪ್ರಾದ ಇಬ್ರಾಹಿಂಪುರ ಗ್ರಾಮದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದವರು ಹೇಳುವ ಪ್ರಕಾರ ಮದ್ಯ ಸೆವಿಸಿ ಸಾವನ್ನಪ್ಪಿದ್ದಾರೆ ಎನ್ನುತ್ತಿದ್ದಾರೆ. ಆಸ್ಪತೆಗೆ ದಾಖಲಾಗಿರುವ 40ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.


Related Articles

Back to top button