
ಪ್ರಗತಿವಾಹಿನಿ ಸುದ್ದಿ: ಬಿಹಾರದ ನಳಂದಾ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, 8 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರದ ನಳಂದಾ ದೀಪನಗರದ ಶೀತಲಾ ದೇಗುಲದಲ್ಲಿ ಈ ದುರಂತ ಸಂಭವಿಸಿದೆ. ದೇವಸ್ಥಾನದಲ್ಲಿ ಭಾರಿ ಜನಸ್ತೋಮ ನೆರೆದಿದ್ದರಿಂದ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ. ಹಲವರು ಅಸ್ವಸ್ಥರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.




