CrimeLatestNational

*10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ: ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ವಿದ್ಯಾರ್ಥಿನಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ಬಿಹಾರದ ಜಮುಯಿಯಲ್ಲಿ ನಡೆದಿದ್ದು, ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ನಂದನ್ ಯಾದವ್ ಎಂಬಾತನ ಕಾಲಿಗೆ ಗುಂಡೇಟು ಹೊಡೆದು ಆತನನ್ನು ಬಂಧಿಸಿದ್ದಾರೆ. ಗಾಯಾಳು ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸ್ದಲಾಗಿದೆ.

ಇನ್ನು ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಆರೋಪಿಗಳ ಬಂಧನಕ್ಕೆ ತೆರಳಿದಾಗ ಅವರು ಪೊಲೀಸರ ಮೇಲೆಯೇ ದಾಳಿ ಮಾಡಲು ಯತ್ನಿಸಿದಾಗ ಈ ಕ್ರಮ ಕೈಗೊಳ್ಳಲಾಗಿದೆ.

ಸೆಪ್ಟೆಂಬರ್ 19 ರಂದು ನಡೆದ ಘಟನೆಯಲ್ಲಿ, 10ನೇ ತರಗತಿಯ ವಿದ್ಯಾರ್ಥಿನಿ ತನ್ನ ಸಹಪಾಠಿಯೊಂದಿಗೆ ಮರವಾ ಪಹಾಡ ಪ್ರದೇಶದಿಂದ ಬೈಕ್ ನಲ್ಲಿ ತೆರಳುತ್ತಿದ್ದಾಗ ಯುವಕರ ಗುಂಪೊಂದು ಅವರನ್ನು ಅಡ್ಡಗಟ್ಟಿ ಕಿರುಕುಳ ನೀಡಿತ್ತು. ಈ ದೌರ್ಜನ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಪ್ರಕರಣದ ತನಿಖೆ ನಡೆಸಿದ ಬಿಹಾರ ಪೊಲೀಸರು ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗಳಾದ ನಂದನ್ ಕುಮಾರ್ ಮತ್ತು ಹರೇರಾಮ್ ಅವರನ್ನು ಬಂಧಿಸಲು ತೆರಳಿದಾಗ, ಅವರು ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಅವರ ಕಾಲಿಗೆ ಗುಂಡು ಹಾರಿಸಿ ಇಬ್ಬರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಶೋಧಕಾರ್ಯ ಮುಂದುವರೆದಿದೆ.

Related Articles

Back to top button