*BREAKING: ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊನ್ನೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲೋಕೇಶ್ (25) ಹಾಗೂ ಕಿರಣ್ (24) ಮೃತ ದುರ್ದೈವಿಗಳು. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Home add -Advt *ವಸತಿ ಸಮುಚ್ಛಯದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ: 44 ಜನರು ಸಾವು*