
ದಾವಣಗೆರೆ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಬಳಿ ಈ ಅಪಘಾತ ಸಂಭವಿಸಿದೆ. ನ್ಯಾಮತಿಯ ಮಾಲತೇಶ್ (25) ಹಾಗೂ ಕುದುರೆಕೊಂಡದ ಶೌರ್ಯ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಇಬ್ಬರು ಗಾಯಗಗೊಂಡಿದ್ದಾರೆ. ಗಾಯಾಳುಗಳಾದ ಮಂಜುಳಾ ಹಾಗೂ ಅನಿಲ್ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




