Belagavi NewsBelgaum NewsKannada NewsKarnataka NewsNationalPolitics

*ಕಿತ್ತೂರು ಬಳಿ ಬೈಕ್ ಅಪಘಾತ: ಹುಬ್ಬಳ್ಳಿ ಮೂಲದ ಇಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿದ್ದಾರೆ.‌

ಕಿತ್ತೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಳೆಯ ಹುಬ್ಬಳ್ಳಿ ಈಶ್ವರ ನಗರದ ರಮೇಶ ಅಂದೆಪ್ಪ ಅಂಬಿಗೇರ (20) ಹಾಗೂ ಎಸ್.ಎಂ. ಕೃಷ್ಣ ನಗರದ ಮದನ್ ಚಂದ್ರಕಾಂತ ಮೇಟಿ (20) ಮೃತ ಯುವಕರು ಎಂದು ಪೊಲೀಸರು ತಿಳಿಸಿದ್ದಾರೆ. ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನದ ಅಂಗವಾಗಿ ಖಾನಾಪುರ ತಾಲೂಕಿನ ನಂದಗಡ ಗ್ರಾಮಕ್ಕೆ ರಾಯಣ್ಣನ ಸಮಾಧಿ ದರ್ಶನ ಪಡೆಯಲು ಯುವಕರು ಸೇರಿಕೊಂಡು ಹೋಗಿದ್ದರು. ದರ್ಶನ ಮುಗಿಸಿ ಮರಳಿ ಹಳೆಯ ಹುಬ್ಬಳ್ಳಿಗೆ ಹೋಗುತ್ತಿದ್ದಾಗ ಕಿತ್ತೂರು ಸಮೀಪ ರಾಷ್ಟ್ರೀಯ ಹೆದ್ದಾರಿ ಮೇಲೆ ಸವಾರನ ನಿಯಂತ್ರಣ ತಪ್ಪಿದ ಬೈಕ್ ಹೆದ್ದಾರಿ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿ ಮೃತ ಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್, ಬೈಲಹೊಂಗಲ ಡಿವೈಎಸ್‌ ಪಿ, ರವಿ ನಾಯ್ಕ, ಕಿತ್ತೂರು ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೊಳ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಕಿತ್ತೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button