
ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಹುಟ್ಟುಹಬ್ಬದ ಸಂಭ್ರಮದಲ್ಲಿ ಭರ್ಜರಿ ಪಾರ್ಟಿ ಆಯೋಜನೆ ಮಾಡಿ, ಪಾರ್ಟಿ ಮೂಡ್ ನಲ್ಲಿ ಮನೆಗೆ ವಾಪಸ್ ಆಗುತ್ತಿದ್ದಾಗ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹೊಸ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
20 ವರ್ಷದ ಸಂಗಮೇಶ್ ಹಾಗೂ 21 ವರ್ಷದ ಆತನ ಸ್ನೇಹಿತ ಕಿರಣ್ ನಾಯಕ್ ಮೃತರು. ಸಂಗಮೇಶ್ ತನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರಿಗಾಗಿ ಪಾರ್ಟಿ ಆಯೋಜಿಸಿದ್ದ. ಪಾರ್ಟಿ ಮುಗಿಸಿ ಸ್ನೇಹಿತನ ಜೊತೆ ಮನೆಯತ್ತ ಬರುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಹೊಡೆದಿದೆ.
ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮಿಣ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ: ಪೊಲೀಸ್ ಇನಸ್ಪೆಕ್ಟರ್ ದಂಪತಿ ಭೀಕರ ಅಪಘಾತಕ್ಕೆ ಬಲಿ
https://pragati.taskdun.com/kalaburagi-a-police-inspector-couple-died-in-a-terrible-accident/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ