
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ: ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಕ್ರದಡಿ ಸಿಲುಕಿದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕುಡುದರಹಾಳ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ದಂಪತಿ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಬೊಮ್ಮಲಾಪುರದ ನಾಗಭೂಷಣ್ (35) ಹಾಗೂ ಸಂಧ್ಯಾ (32) ಮೃತ ದಂಪತಿ. ಬೊಮ್ಮಲಾಪುರದಿಂದ ಬೈಕ್ ನಲ್ಲಿ ಸಿರಗುಪ್ಪಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಹಚ್ಚೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.