
ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಸಹೋದರರಿಬ್ಬರೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಬೆಟ್ಕುಳಿ ಗ್ರಾಮದ ನಿವಾಸಿಗಳಾದ ಗುರು ಹರಿಕಾಂತ ಹಾಗೂ ವಿಠಲ ಹರಿಕಾಂತ ಗಾಯಾಳುಗಳು.
ಅಪಘಾತದ ತೀವ್ರತೆಗೆ ಬೈಕ್ ಹಾಗೂ ಕಾರು ನುಜ್ಜುಗುಜ್ಜಾಗಿದೆ. ಗಾಯಾಳು ಸಹೋದರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




