Belagavi NewsBelgaum NewsKannada NewsKarnataka News

*ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಸವಾರ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾನಾಪುರ ಪಟ್ಟಣದ ಹೊರವಲಯದ ಮರಾಠಾ ಮಂಡಳ ಪದವಿ ಕಾಲೇಜ್ ಬಳಿ ಬೆಳಗಾವಿ ಪಣಜಿ ಹೆದ್ದಾರಿಯಲ್ಲಿ ಅತೀವೇಗವಾಗಿ ಬಂದ ಬೈಕ್ ಸವಾರನೊಬ್ಬ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ವರದಿಯಾಗಿದೆ.

ಮೃತ ಬೈಕ್ ಸವಾರನನ್ನು ಸಮೀಪದ ಹಲಕರ್ಣಿ ಗ್ರಾಮದ ನಿವಾಸಿ ನಿಖಿಲ ನಾಗೇಂದ್ರ ಗುಂಜಿಕರ (24) ಎಂದು ಗುರುತಿಸಲಾಗಿದೆ. ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ನಿಖಿಲ ಸ್ನೇಹಿತ ಯಶವಂತ ಬಡಿಗೇರ ಅವರಿಗೂ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ಕುರಿತು ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button