Belagavi NewsBelgaum NewsCrimeKannada NewsKarnataka News
*ನಿಂತಿದ್ದ ಟ್ರಕ್ಗೆ ಬೈಕ್ ಡಿಕ್ಕಿ; ಸವಾರ ಸಾವು*

ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಟ್ರಕ್ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅಥಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಥಣಿ-ಶಿನ್ನಾಳ ಡಾಂಬರ ರಸ್ತೆಯಲ್ಲಿರುವ ಸ್ವಾಗತ ಹೋಟೆಲ್ ಸಮೀಪ ಘಟನೆ ಸಂಭವಿಸಿದೆ. ಅಥಣಿ ಶಿವಾಜಿ ಸರ್ಕಲ್ ನಿವಾಸಿ ಅಪ್ಪಾಸಾಹೇಬ ಲಕ್ಷ್ಮಣ ನರೋಡೆ (43) ಹೀರೋ ಎಚ್ಎಫ್ ಡಿಲಕ್ಸ್ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಮೇಲೆ ನಿಂತಿದ್ದ ಟಾಟಾ ಗೂಡ್ಸ್ ಕ್ಯಾರಿಯರ್ ಟ್ರಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಮುಖ ಹಾಗೂ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಘಟನೆ ಕುರಿತು ಅಥಣಿ ಗ್ರಾಮೀಣ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


