Karnataka News

*ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ಗ್ರಾಮಾಂತರದ ಹಿರೇಹಳ್ಳಿ ಬಳಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ತುಂಬಿಕೊಂಡು ಹೊರಟಿದ್ದ ಕಂಟೇನರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button