Kannada NewsKarnataka NewsLatest
*ಕಚೇರಿಗೆ ತೆರಳುತ್ತಿದ್ದಾಗ ಬೈಕ್ ಗೆ ಲಾರಿ ಡಿಕ್ಕಿ: ಮಹಿಳೆ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮಗಳನ್ನು ಶಾಲೆಗೆ ಬಿಟ್ಟು ದ್ವಿಚಕ್ರವಾಹನದಲ್ಲಿ ಕಚೇರಿಗೆ ತೆರಳುತ್ತಿದ್ದ ವೇಳೆ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ನಡೆದಿದೆ.
ಕಲ್ಪನಾ (೩೮) ಮೃತ ಮಹಿಳೆ. ಪ್ರಜಾವಾಣಿ ಪತ್ರಿಕೆಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿ. ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಚಿಕ್ಕ ಮಗಳು ಡಿಂಪನಾ (4)ಸೇರಿದಂತೆ ಬಂಧು ಬಳಗವನ್ನ ಅಗಲಿದ್ದಾರೆ. ಮಗಳನ್ನು ಶಾಲೆಗೆ ಬಿಟ್ಟು ಆಫೀಸ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಗಾಯಗೊಂಡಿದ್ದ ಕಲ್ಪನಾ ಅವರನ್ನು ಕೂಡಲೇ ಕಣ್ವ ಸತ್ಯಸಾಯಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ.
ಸಂಜೆ ಹಾಸನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕಲ್ಪನಾ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಪ್ರಜಾವಾಣಿ ಬಳಗ, ಸ್ನೇಹಿತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.