Kannada NewsKarnataka NewsLatest
*ಭೀಕರ ಅಪಘಾತ: ಪಿಯುಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ಪ್ಲೈವುಡ್ ಸಾಗಿಸುತ್ತಿದ್ದ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪಿಯು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಕ್ರಾಸ್ ಬಳಿ ನಡೆದಿದೆ.
ಭಟ್ಕಳದ ಫಿರ್ದೌಸ್ ನಗರ ನಿವಾಸಿ ಮೊಹಮ್ಮದ್ ಮೊಹ್ತೆಶಾಂ (18) ಮೃತ ವಿದ್ಯಾರ್ಥಿ. ಮೊಹಮ್ಮದ್ ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಕೇರಳಕಡೆಯಿಂದಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಮೊಹಮ್ಮದ್ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



