ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ವಿದ್ಯಾವಂತ ಯುವಕರಿಗೆ ಉದ್ಯೋಗದ ಲಭ್ಯತೆಯನ್ನು ಸುಧಾರಿಸಲು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತವು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಇಂದು ಬೆಳಗಾವಿಯ ನಾಥಪೈಯ್ ಸರ್ಕಲ್ ನಿಂದ ಆರಂಭವಾದ ಬೈಕ್ ರ್ಯಾಲಿಯು, ಶಾಹಾಪುರ, ಗೊವಾವೇಸ್, ಕ್ಯಾಂಪ್, ಭೋಗಾರ್ವೆಸ್, ಚನ್ನಮ್ಮ ಸರ್ಕಲ್ ಮಾರ್ಗವಾಗಿ ಸಾಗಿ ಡಿಸಿ ಕಚೇರಿ ತಲುಪಿ, ಬಳಿಕ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಅನೇಕ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳೊಂದಿಗೆ ಆರೋಗ್ಯ ರಕ್ಷಣೆಯಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಬೆಳಗಾವಿ ನೇರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಗೋವಾಕ್ಕೆ ಹತ್ತಿರದಲ್ಲಿದೆ. ಈ ಪ್ರದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸಲು, ಕೈಗೆಟುಕುವ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆ ನೀಡಬೇಕು. ರಾಷ್ಟ್ರೀಯ ಹೆದ್ದಾರಿ 4 ಮತ್ತು ಬೆಳಗಾವಿ ವಿಮಾನ ನಿಲ್ದಾಣದ ಸಮೀಪವಿರುವ ಪ್ರದೇಶದಲ್ಲಿ ಐಟಿ ಪಾರ್ಕ್‌ಗೆ ಸೂಕ್ತವಾದ ಸ್ಥಳವಾಗಿದೆ. ಹಾಗಾಗಿ ಐಟಿ ಪಾರ್ಕ ನಿರ್ಮಿಸಬೇಕು ಎಂದು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ