*ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್ಯಾಲಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್ಯಾಲಿ ನಡೆಸಲಾಯಿತು.
ಬಿಜೆಪಿಯ ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿದರು.
ಬೆಳಗಾವಿಯ ಹಿಂಡಲಗಾ ಗಣಪತಿ ದೇವಸ್ಥಾನದಿಂದ ಆರಂಭಗೊಂಡ ರ್ಯಾಲಿ ಬೆನ್ನಾಳಿ, ಗಣೇಶಪೂರ ಮಾರ್ಗವಾಗಿ 11 ಕಿ.ಮೀ ಕ್ರಮಿಸಿ ರ್ಯಾಲಿ ಮರಳಿ ಹಿಂಡಲಗಾ ಗಣಪತಿ ದೇವಸ್ಥಾನಕ್ಕೆ ಆಗಮಿಸಿ ಸಂಪನ್ನಗೊಂಡಿತು.
ಇದೇ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ವೀರ ಸಾವರಕರ ಸೇರಿದಂತೆ ಅನೇಕ ಮಹನೀಯರು ತಮ್ಮ ಜೀವನವನ್ನೇ ಮುಡುಪಾಗಿರಿಸಿದ್ದರು. ಕಠಿಣ ಜೈಲು ಶಿಕ್ಷೆ ಅನುಭವಿಸಿದರು.
ಅವರೆಲ್ಲರ ತ್ಯಾಗದ ಫಲವಾಗಿ ಇಂದು ನಾವು ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ, ದೇಶಭಕ್ತಿ ಎನ್ನುವುದು ನಮ್ಮ ಉಸಿರಾಗಬೇಕು, ದೇಶಭಕ್ತಿ ಜಾಗೃತಿಗಾಗಿ ಹರ್ ಹರ್ ಘರ್ ತಿರಂಗಾ ಕಾರ್ಯಕ್ರಮ ಭಾರತೀಯರ ಮನ ಗೆದ್ದಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಯುವರಾಜ್ ಜಾಧವ್, ಮುಖಂಡ ಧನಂಜಯ ಜಾಧವ, ಜಿಲ್ಲಾ ಉಪಾಧ್ಯಕ್ಷ ವಿನಯ ಕದಂ,ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೊಲಕಾರ, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಚೇತನ್ ಪಾಟೀಲ,ಗಜಾನನ ನಾಯ್ಕ, ಪ್ರದೀಪ್ ಪಾಟೀಲ, ಭಾಗ್ಯಶ್ರೀ ಕೋಕಿತಕರ್, ಶ್ವೇತಾ ಜಗದಾಳೆ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.