Belagavi NewsBelgaum NewsKannada NewsKarnataka NewsPolitics

*ಮಾಹಿತಿ ಹಕ್ಕು ಜನಪರ ಕಾಯ್ದೆ: ವಾರ್ಷಿಕ 7 ಸಾವಿರ ಅರ್ಜಿಗಳ ಇತ್ಯರ್ಥಕ್ಕೆ ಗುರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಮಾಹಿತಿ ಹಕ್ಕು ಕಾಯ್ದೆ ಜನಪರ ಮತ್ತು ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದೆ. ಸ್ವತಂತ್ರ ಭಾರತದಲ್ಲಿ ಅತ್ಯಂತ ಕ್ರಾಂತೀಕಾರಕ ಕಾಯ್ದೆಯಾಗಿದೆ. ಸಾಮಾನ್ಯ ಜನರಿಗೆ ಸರ್ಕಾರದ ಮಾಹಿತಿ ಸುಲಭವಾಗಿ ತಲುಪಬೇಕೆಂಬ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯು 2005 ರ ಅಕ್ಟೋಬರ್ 12 ರಂದು ಜಾರಿಗೆ ಬಂದಿರುತ್ತದೆ. ಕರ್ನಾಟಕ ರಾಜ್ಯವು ಈ ಕಾಯ್ದೆಯನ್ನು ಅನುಷ್ಠಾನಗೊಳಿಸಿದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ” ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳರವರು ತಿಳಿಸಿದ್ದಾರೆ.

ಕರ್ನಾಟಕ ಮಾಹಿತಿ ಹಕ್ಕು ಆಯೋಗವು ಕಳೆದ ಒಂದು ವರ್ಷದಲ್ಲಿ ರಾಷ್ಟ್ರದಲ್ಲಿಯೇ ದಾಖಲೆ ಪ್ರಮಾಣದಲ್ಲಿ 40 ಸಾವಿರ ದ್ವೀತಿಯ ಮೇಲ್ಮನವಿ ಪ್ರಕರಣಗಳನ್ನು ಇತ್ಯರ್ಥ ಮಾಡಿದೆ. ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠದಲ್ಲಿ ಪ್ರತಿದಿನ ಸುಮಾರು 40-60 ಅರ್ಜಿಗಳ ವಿಚಾರಣೆ ಆಫ್‌ಲೈನ್ ಮತ್ತು ಆನ್‌ಲೈನನಲ್ಲಿ ನಡೆಯುತ್ತಿದ್ದು. ಗ್ರಾಮೀಣ ಭಾಗದ ಜನರ ಅರ್ಜಿಗಳಿಗೆ ಹೆಚ್ಚಿನ ಒತ್ತು ನೀಡಿ ಗ್ರಾಮೀಣ ಭಾಗದ ಸಮಸ್ಯೆಗಳಾದ ಕುಡಿಯುವ ನೀರು, ರಸ್ತೆ, ವಿದ್ಯುತ್ ಸರಬರಾಜು, ಸ್ವಚ್ಚತೆ, ಆರೋಗ್ಯ ಮತ್ತು ಇತ್ಯಾದಿ ಮೂಲ ಸೌಕರ್ಯಗಳ ಸಮಸ್ಯೆಗಳ ವಿಚಾರಣೆಗಳು ಇತ್ಯರ್ಥವಾಗುತ್ತಿದ್ದು, ಮಾಹಿತಿ ನೀಡದೇ ಇರುವ ಅಧಿಕಾರಿಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡಲು ಶಿಸ್ತು ಕ್ರಮ ಜರುಗಿಸಿ, ವಿಚಾರಣೆ ಸಮಿತಿಯ ಶಿಫಾರಸ್ಸು, ದಂಡ ಮತ್ತು ಅರ್ಜಿದಾರರಿಗೆ ಪರಿಹಾರದ ಆದೇಶಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Home add -Advt

ಬೆಳಗಾವಿ ಪೀಠಕ್ಕೆ ಬರುವ ಅರ್ಜಿಗಳ ಪ್ರಮಾಣ ಹೆಚ್ಚಳ ಇದ್ದುದ್ದರಿಂದ ವರ್ಷಕ್ಕೆ 6000 ರಿಂದ 7000 ವಿಚಾರಣೆಗಳ ಇತ್ಯರ್ಥಕ್ಕಾಗಿ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಮತ್ತು ಜಿಲ್ಲಾವಾರು ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button