
ಪ್ರಗತಿವಾಹಿನಿ ಸುದ್ದಿ: ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಮರ ಬಿದ್ದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ನಾಗಲಾಪುರದಲ್ಲಿ ಈ ದುರಂತ ಸಂಭವಿಸಿದೆ. ಪತಿ, ಪತ್ನಿ ಹಾಗೂ ಪುತ್ರಿ ಮೂವರು ಬೈಕ್ ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ಬೃಹತ್ ಆಲದ ಮರ ಬೈಕ್ ಮೇಲೆ ಬಿದ್ದಿದೆ. ಸ್ಥಳ್ದಲ್ಲೇ ದಂಪತಿ ಸಾವನ್ನಪ್ಪಿದ್ದಾರೆ. ಮೂರು ವರ್ಷದ ಮಗಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಮೇಶ್ ಹಾಗೂ ಮಂಜುಳಾ ಮೃತ ದಂಪತಿ. ಸೌಜನ್ಯ ಗಾಯಗೊಂಡಿರುವ ಮಗಳು. ಮುದಗಲ್ ಪಟ್ಟಣದಿಂದ ನಾಗಲಾಪುರಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನ ಅಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.