ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ವ್ಹೀಲರ್ಸ್ ಗಳ ಪುಂಡಾಟ ಹೆಚ್ಚಾಗುತ್ತಿದೆ. ಬೈಕ್ ವ್ಹೀಲಿಂಗ್ ಮಡುತ್ತಿದ್ದ ಇಬ್ಬರು ಯುವಕರು ಕ್ಯಾಂಟರ್ ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ನಡೆದಿದೆ.
ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ವ್ಹೀಲಿಂಗ್ ಮಾಡುತ್ತಿದ್ದ ವೇಳೆ ಕ್ಯಾಂಟರ್ ಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 22 ವರ್ಷದ ಫರ್ಜಾನ್ ಹಾಗೂ ಮನೋಜ್ ಎಂಬ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ವಿಜಯಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ