Latest

*ಮತ್ತೊಂದು ಭೀಕರ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಪಲ್ಸರ್ ಬೈಕ್ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ನಡೆದಿದೆ.

ಅನಿಲ ಖೈನೂರ (23), ನಿಂಗರಾಜ್ ಚೌಧರಿ (22) ಕುಮಾರ ಪ್ಯಾಟಿ (18) ರಾಯಪ್ಪ ಬಾಗೇವಾಡಿ (24) ಮೃತ ದುರ್ದೈವಿಗಳು. ನಾಟಕ ನೋಡಲೆಂದು ಗುಂಪಾಗಿ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಪಲ್ಸರ್ ಬೈಕ್ ಡಿಕ್ಕಿಹೊಡೆದಿದೆ. ಬೈಸ್ ಸವಾರ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ಅಪಘಾತದಲ್ಲಿ ಶಾಹಿದ ಹುನಗುಂದ, ಪ್ರಶಾಂತ ಕುರುಬಗೌಡ, ಹನುಮಂತ ಕುರುಬಗೌಡ ಎಂಬ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುದ್ದೆಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button