
ಪ್ರಗತಿವಾಹಿನಿ ಸುದ್ದಿ: ಭೀಕರ ಬೈಕ್ ಅಪಘಾತದಲ್ಲಿ ತಂದೆ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಂದೆ-ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತ್ನಿಗೆ ಗಂಭಿರ ಗಾಯಗಳಾಗಿವೆ.
ಚಿಕ್ಕಪೇಟೆಯ ಅಮಿತ್ (32) ಹಾಗೂ 5 ವರ್ಷದ ಮಗಳು ಅನ್ವಿತ ಮೃತ ದುರ್ದೈವಿಗಳು. ಅಮಿತ್ ಪತ್ನಿ ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ತಂದೆ ಹಾಗೂ ಮಗಳ ಇಬ್ಬರ ತಲೆಗೂ ಗಂಭೀರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ನೆಲಮಂಗಲ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ