Karnataka NewsLatest
*ಭೀಕರ ಅಪಘಾತ: ತಾಯಿ-ಮಗ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಅಪರಿಚಿತ ವಾಹನ ಡಿಕ್ಕಿಯಾಗಿ ತಾಯಿ ಹಾಗೂ ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ನಡೆದಿದೆ.
ಅಪರಿಚಿತವಾಹನ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೇತಗಾನಹಳ್ಳಿ ನಿವಾಸಿಗಳಾದ ಪದ್ಮ (48) ಹಗೂ ಮಗ ರಘು (26) ಮೃತ ದುರ್ದೈವಿಗಳು.
ಶ್ರೀನಿವಾಸಪುರದಿಂದ ಕೇತಗಾನಹಳ್ಳಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




